ಡಿಸೆಂಬರ್ 31ರ ಒಳಗೆ ಎಲ್ಲಾ ಅರ್ಹರಿಗೂ ಗ್ಯಾರಂಟಿ ಯೋಜನೆಯ ಎಲ್ಲಾ ಸೌಲಭ್ಯ ದೊರಕಿಸಲು ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ.

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ.

ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಈಗಾಗಲೇ ಜಾರಿಗೆ ತಂದು ಆರು ತಿಂಗಳು ತುಂಬಿದೆ. ಗ್ಯಾರಂಟಿ ಯೋಜನೆಗಳು ಯಾವು ಎಂದು ಈಗಾಗಲೇ ನಿಮಗೆ ತಿಳಿದಿರಬಹುದು ಗೃಹಲಕ್ಷ್ಮಿ ಯೋಜನೆ, ಗೃಹಜೋತಿ ಯೋಜನೆ, ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ, ಯುವನಿಧಿ ಯೋಜನೆ, ಈ ಯೋಜನೆಗಳನ್ನು ಜಾರಿಗೆ ತರಲಾಯಿತು. ರಾಜ್ಯ ಸರ್ಕಾರವು ನುಡಿದಂತೆ ನಡೆಯುತ್ತೇವೆ ಎಂಬ ಒಂದು ಮಾತನ್ನು ನೀಡಿತ್ತು ಆದರೆ ಅದರಂತೆಯೇ ರಾಜ್ಯ ಸರ್ಕಾರವು ನಡೆದುಕೊಳ್ಳುತ್ತಿದೆ.

WhatsApp Group Join Now
Telegram Group Join Now

ಕೆಲವರಿಗೆ ಈ ಸೌಲಭ್ಯಗಳು ದೊರಕದೆ ಇರಬಹುದು, ದೊರಕದೆ ಇರಲು ನೀವೇ ಮುಖ್ಯವಾಗಿ ಕಾರಣರಾಗಿರುತ್ತೀರಿ. ಈ ಯೋಜನೆಗಳನ್ನು ಪಡೆಯಲು ಅರ್ಹರಾಗಿರಬೇಕು ಎಂದರೆ ಅವರು ಕೇಳುವ ದಾಖಲೆಗಳಿಗೆ ಸಿದ್ದ ಬದ್ದ ರಾಗಿರಬೇಕು. ಗ್ಯಾರಂಟಿ ಯೋಜನೆಯ ಅಡಿಯಲ್ಲಿ ಹಲವರು ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಇನ್ನು ಕೆಲವರಿಗೆ ದಾಖಲೆಗಳು ಎಲ್ಲಾ ಸರಿದು ಅವರು ಆಗಿದ್ದು ಹಣ ಬರದೆ ಇರಲು ರಾಜ್ಯ ಸರ್ಕಾರವೇ ಕಾರಣವಾಗುತ್ತದೆ.

ಏಕೆಂದರೆ ಗೃಹಲಕ್ಷ್ಮಿ ಯೋಜನೆಯಲ್ಲಿ ಕೆಲವರಿಗೆ ಹಣ ಬಂದಿಲ್ಲ. ಇದಕ್ಕೆ ರಾಜ್ಯ ಸರ್ಕಾರವು ಬ್ಯಾಂಕ್ ಗಳೆ ಕಾರಣ ದಿನಕ್ಕೆ ಒಂದೊಂದು ಬ್ರಾಂಚ್ ಗೆ ಹಣ ವರ್ಗಾಯಿಸುತ್ತಾರೆ ಎಂದು ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳು ಕೆಲವರಿಗೆ ಅನುಕೂಲವಾಗಿದೆ. ಆದರೆ ಇನ್ನೂ ಕೆಲವರಿಗೆ ಅನುಕೂಲವಾಗಿಲ್ಲ ಸಿಎಂ ಸಿದ್ದರಾಮಯ್ಯನವರು ಅರ್ಹರಾಗಿರುವ ಎಲ್ಲರಿಗೂ ಕೂಡ ಈ ಗ್ಯಾರಂಟಿ ಯೋಜನೆಗಳನ್ನು ಅನುಕೂಲಕರವಾಗಿ ತಲುಪಿಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಬುಧವಾರದಂದು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಾಲ್ಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಗತಿಗೆ ಸಭೆಯನ್ನು ಏರ್ಪಡಿಸಿದ್ದರು.

ಇದನ್ನು ಓದಿ :- ಪ್ರತಿ ತಿಂಗಳು ಕೂಡ ಈ ದಿನಾಂಕದಂದು ಗೃಹಲಕ್ಷ್ಮಿ ಹಣ ವರ್ಗಾವಣೆ ಆಗುತ್ತದೆ. ಯಾವ ದಿನಾಂಕ ಎಂದು ತಿಳಿಯಲು ಈ ಲೇಖನವನ್ನು ಓದಿ !

ಗೃಹಲಕ್ಷ್ಮಿ ಯೋಜನೆ

ಈ ಯೋಜನೆಯ ಅಡಿಯಲ್ಲಿ ಎಲ್ಲಾ ಮನೆ ಒಡತಿಯರಿಗೆ ಸಾವಿರ ರೂಪಾಯಿ ಕೊಡುವುದಾಗಿ ಸರ್ಕಾರವು ಆದೇಶ ಕೊಟ್ಟಿದ್ದು ಸರ್ಕಾರವು ಅದರಂತೆ ನಡೆಯುತ್ತಿದೆ. ಕೆಲವರಿಗೆ ಇನ್ನೂ ಹಣ ಬಂದಿಲ್ಲ ಏಕೆಂದರೆ ಅವರ ಆಧಾರ್ ಲಿಂಕ್ ಆಗಿರುವುದಿಲ್ಲ ಇದು ಕೂಡ ಒಂದು ಹಣ ಬರದೆ ಇರಲು ಮುಖ್ಯ ಕಾರಣವಾಗುತ್ತದೆ. ನವೆಂಬರ್ ತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು,1.10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ. ಇನ್ನು ಎರಡು ಲಕ್ಷ ಫಲಾನುಭವಿಗಳ ತೊಡಕು ನಿವಾರಿಸಲಾಗುತ್ತಿದೆ.

ಹಣ ಬರದೇ ಇರುವವರನ್ನು ಅಂಗನವಾಡಿ ಕಾರ್ಯಕರ್ತೆಯರು ಬ್ಯಾಂಕಿಗೆ ಕರೆದೊಯ್ದು ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ. ಪ್ರತಿ ಊರಿನ ಗ್ರಾಮ ಪಂಚಾಯಿತಿಯಲ್ಲಿ ಗೃಹಲಕ್ಷ್ಮಿ ಅದಾಲತ್ ಆಯೋಜಿಸಿ ಬಗೆಹರಿಸಲು ಕ್ರಮವನ್ನು ಕೈಗೊಳ್ಳಲಾಗುತ್ತದೆ.

ಶಕ್ತಿ ಯೋಜನೆ

ಶಕ್ತಿ ಯೋಜನೆಯ ಅಡಿಯಲ್ಲಿ ಎಲ್ಲಾ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣ ನೀಡಲಾಗಿದೆ. ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ ನಲ್ಲಿ ಉಚಿತ ಟಿಕೆಟ್ ನೀಡಲಾಗುತ್ತಿದ್ದು ನವೆಂಬರ್ 21ರವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿರುತ್ತಾರೆ. ಸಾರಿಗೆ ಬಸ್ ನಲ್ಲಿ ಪ್ರತಿ ತಿಂಗಳಿಗೆ ಶಕ್ತಿ ಯೋಜನೆಯ ಮುಂಚೆ 87.17 ಲಕ್ಷ ಇತ್ತು ಆದರೆ ಶಕ್ತಿ ಯೋಜನೆಯ ನಂತರ 1.08 ಕೋಟೆಯಿಂದ 1.15 ಕೋಟಿಯವರೆಗೆ ಏರಿಕೆ ಆಗಿದೆ. ಈಗಾಗಲೇ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಗೆ 828 ಸಾಮಾನ್ಯ ಮತ್ತು 145 ವಿದ್ಯುತ್ ಚಾರಿತ ಬಸ್ ಗಳನ್ನು ಸೇರ್ಪಡೆಗೊಳಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದರು.

ಗೃಹ ಜ್ಯೋತಿ ಯೋಜನೆ

ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಮನೆಮನೆಗೂ 200 ಯೂನಿಟ್ ಉಚಿತ ಜ್ಯೋತಿ ಕೊಡಲಾಗಿತ್ತು. ಗೃಹಜ್ಯೋತಿ ಯೋಜನೆಗೆ ಈವರೆಗೆ 1.62 ಕೋಟಿ ಜನ ನೋಂದಣಿ ಮಾಡಿಕೊಂಡಿದ್ದು, 1.50 ಕೋಟಿ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆ ದೊರಕಿದೆ.

ಅನ್ನಭಾಗ್ಯ ಯೋಜನೆ

ಅನ್ನಭಾಗ್ಯ ಯೋಜನೆಯಡಿಯಲ್ಲಿ 12.95 ಲಕ್ಷ ಪಡಿತರ ಚೀಟಿದಾರರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಮೂಲಕ ಅನ್ನಭಾಗ್ಯ ಯೋಜನೆಗೆ ಸೇರ್ಪಡಿಸಲಾಗಿದೆ. 7.67 ಲಕ್ಷ ಅನರ್ಹ ಪಡಿತರ ಚೀಟಿಗಳ ಸಮಸ್ಯೆಗಳನ್ನು ಗುರುತಿಸಿ ಸರ್ಕಾರ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ಒಟ್ಟಾರೆ ಡಿಸೆಂಬರ್ ತಿಂಗಳ ಕೊನೆಯ ದಿನಗಳ ಒಳಗೆ ಎಲ್ಲಾ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳುತ್ತೇನೆ ಎಂದು ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಈ ಲೇಖನವನ್ನು ಸಂಪೂರ್ಣವಾಗಿ ಓದಿದ್ದಕ್ಕೆ ಧನ್ಯವಾದಗಳು.

Leave a Comment