ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಬಗ್ಗೆ ಈಗಾಗಲೇ ರಾಜ್ಯದಲ್ಲಿ ಬಹಳಷ್ಟು ಚರ್ಚೆಗಳು ನಡೆಯುತ್ತಿದೆ ಅಲ್ಲದೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಬೆಂದಲ್ಲೇ ಚುನಾವಣೆ ಸಮಯದಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಜಾರಿ ಮಾಡುವ ಸಲುವಾಗಿ ಜೂನ್ ಎರಡನೇ ದಿನಾಂಕ ನಡೆದ ಸರ್ಕಾರದ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು 5 ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಘೋಷಣೆ ಮಾಡಿದ್ದು ಅವುಗಳಲ್ಲಿ ಜೂನ್ 11ನೇ ದಿನಾಂಕ ಶಕ್ತಿ ಯೋಜನೆ ಅಂದರೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆಯನ್ನು ಜಾರಿ ಮಾಡಲು ನಿರ್ಧರಿಸಿದ್ದು ನಂತರದಲ್ಲಿ ಗೃಹಜೋತಿ ಮತ್ತು ಗೃಹಲಕ್ಷ್ಮಿ ಯೋಜನೆಗೂ ಅರ್ಜಿ ಪ್ರಕ್ರಿಯೆ ಆರಂಭಿಸಲು ಸರ್ಕಾರ ನಿರ್ಧರಿಸಿದ್ದು ಇದರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಸಮಸ್ಯೆಯಾಗಿದ್ದು ಇದೀಗ ರಾಜ್ಯ ಸರ್ಕಾರ ಜುಲೈ 12ನೇ ದಿನಾಂಕದಿಂದ ಮನೆ ಯಜಮಾನರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಿದೆ ಅಲ್ಲದೆ ಅರ್ಜಿ ಸಲ್ಲಿಸಲು ಹೊಸ ಆಪ್ ಕೂಡ ಬಿಡುಗಡೆ ಮಾಡಲಿದೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 12 ರಿಂದ ಮಹಿಳೆಯರಿಗೆ ಅವಕಾಶ.
ರಾಜ್ಯದ ಮನೆಯ ಯಜಮಾನರು ಪ್ರತಿ ತಿಂಗಳು 2000 ದಂತೆ ಸರ್ಕಾರದಿಂದ ಹಣ ಪಡೆಯಲು ಅರ್ಜಿ ಸಲ್ಲಿಸಲು ಈಗಾಗಲೇ ರಾಜ್ಯ ಸರ್ಕಾರ ಅವಕಾಶ ನೀಡಿದ್ದು ಆ ಸಮಯದಲ್ಲಿ ಸೇವಾ ಸಿಂಧು ಪೋರ್ಟಲ್ಲಿ ತಾಂತ್ರಿಕ ತೊಂದರೆಗಳಿಂದ ಅರ್ಜಿ ಸಲ್ಲಿಸಲು ಸಮಸ್ಯೆ ಆದ ಕಾರಣ ಇದೀಗ ಗೃಹಲಕ್ಷ್ಮಿ ಯೋಜನೆಗಾಗಿಯೇ ಹೊಸ ಆಪ್ ಒಂದನ್ನು ಬಿಡುಗಡೆ ಮಾಡಲಿದೆ ಈ ಆಪ್ ಮೂಲಕ ಜುಲೈ 12ನೇ ದಿನಾಂಕದಿಂದ ಮಹಿಳೆಯರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ರಾಜ್ಯ ಸರ್ಕಾರ ನೀಡಲಿದೆ ಆದರೆ ಈ ಹಿಂದೆ ಗೃಹಲಕ್ಷ್ಮಿ ಯೋಜನೆಗೆ ಬೇಕಾಗುವ ದಾಖಲೆಗಳು ಮತ್ತು ಅರ್ಜಿ ಫಾರಂ ಅನ್ನು ಈ ಹೊಸ ಆಪ್ ನಲ್ಲೂ ಕೇಳಲಾಗುತ್ತದೆ ಇವುಗಳನ್ನು ಬಳಸಿಕೊಂಡೆ ಜುಲೈ 12ನೇ ದಿನಾಂಕದಿಂದ ಈ ಹೊಸ ಆಪ್ ನಲ್ಲಿ ಅರ್ಜಿ ಸಲ್ಲಿಸಬೇಕಾಗಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರದಿಂದ ಹೊಸ ಆಪ್ ಬಿಡುಗಡೆ.!
ಸದ್ಯ ಈ ಬಗ್ಗೆ ಈಗಾಗಲೇ ರಾಜ್ಯದ ಎಲ್ಲಾ ಜನರಿಗೂ ಮಾಹಿತಿ ತಿಳಿದಿದ್ದು ರಾಜ್ಯದಲ್ಲಿ ಜೂನ್ ಎರಡನೇ ದಿನಾಂಕ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಒಂದೇ ಬಾರಿ ಐದು ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಘೋಷಣೆ ಮಾಡಿದ್ದು ಇದರಂತೆ ಜೂನ್ 11ನೇ ದಿನಾಂಕ ಶಕ್ತಿ ಯೋಜನೆ ಜಾರಿಯಾಗಿದ್ದು ಇದೀಗ ಸೇವಾ ಸಿಂಧು ಪೋರ್ಟಲ್ಲಿ ಗೃಹಜೋತಿ ಯೋಜನೆಗೂ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ ಆದರೆ ಗೃಹಲಕ್ಷ್ಮಿ ಯೋಜನೆಗೂ ಇದೇ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದ್ದು.
ರಾಜ್ಯದಲ್ಲಿ ಒಂದೇ ಬಾರಿ ಎರಡು ಗ್ಯಾರಂಟಿಗಳಿಗೂ ಅರ್ಜಿ ಸಲ್ಲಿಸಲು ಜನರು ಮುಂದಾದ ಕಾರಣ ತಾಂತ್ರಿಕ ಸಮಸ್ಯೆ ವೆಬ್ಸೈಟ್ನಲ್ಲಿ ಉಂಟಾಗಿ ಇದೀಗ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಗಾಗಿಯೇ ಹೊಸ ಆಪ್ ಒಂದನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು ಇದೀಗ ಇದೆ ಜುಲೈನಲ್ಲಿ ಬಿಡುಗಡೆ ಮಾಡುವುದಾಗಿ ಮತ್ತು ಜುಲೈ 12ನೇ ದಿನಾಂಕದಿಂದ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡುವುದಾಗಿ ರಾಜ್ಯ ಸರ್ಕಾರ ಜೂನ್ 29ನೇ ದಿನಾಂಕ ನಡೆದ ಕ್ಯಾಬಿನೆಟ್ ಮೀಟಿಂಗ್ನಲ್ಲಿ ಅಧಿಕೃತವಾಗಿ ಆದೇಶ ಹೊರಡಿಸಿದೆ ಇದರಂತೆ ಇನ್ನೂ ಕೆಲವೇ ದಿನಗಳಲ್ಲಿ ಮಹಿಳೆಯರು ಪ್ರತಿ ತಿಂಗಳು ಬ್ಯಾಂಕ್ ಖಾತೆಗೆ 2,000 ಹಣ ಪಡೆಯಲು ಅರ್ಜಿ ಸಲ್ಲಿಸಬಹುದು.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ಎಲ್ಲಾ ದಾಖಲೆಗಳು ಕಡ್ಡಾಯ.
ಈಗಾಗಲೇ ಎಲ್ಲರಿಗೂ ತಿಳಿದಿರುವ ಹಾಗೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಎಲ್ಲಾ ದಾಖಲೆಗಳ ಬಗ್ಗೆ ನಿಮಗೆ ಮಾಹಿತಿ ಇದೆ ಅಂದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಎಪಿಎಲ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್ ದಾರ ಆಗಿದ್ದರೂ ಅರ್ಜಿ ಸಲ್ಲಿಸಬಹುದು ಆದರೆ ಬಿಪಿಎಲ್ ಕಾರ್ಡ್ ನಲ್ಲಿ ಅಥವಾ ಎಪಿಎಲ್ ಕಾರ್ಡ್ ನಲ್ಲಿ ಮನೆಯ ಯಜಮಾನಿಯಾ ಫೋಟೋ ಮೊದಲು ಇರಬೇಕು ಅಲ್ಲದೆ ಬಿಪಿಎಲ್ ಕಾರ್ಡ್ ನಲ್ಲಿ ಎಷ್ಟೇ ಮಹಿಳೆಯರ ಹೆಸರು ಇದ್ದರು ಅದರಲ್ಲಿ ಮೊದಲ ಪುಟದಲ್ಲಿ ಇರುವ ಒಬ್ಬ ಮಹಿಳೆಗೆ ಅಂದರೆ ಮನೆ ಯಜಮಾನಿಗೆ ಮಾತ್ರ ಪ್ರತಿ ತಿಂಗಳು 2000 ಹಣ ನೀಡಲಾಗುತ್ತದೆ.
- ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಮನೆ ಯಜಮಾನಿಯ ಹೆಸರು ಮತ್ತು ವಿಳಾಸ.
- ಮನೆಯ ಆಧಾರ್ ಕಾರ್ಡ್ ಸಂಖ್ಯೆ
- ಚುನಾವಣಾ ಗುರುತಿನ ಚೀಟಿ ಸಂಖ್ಯೆ
- ಮಹಿಳೆ ಮನೆಯ ಪಡಿತರ ಚೀಟಿ ಸಂಖ್ಯೆ ಮತ್ತು ಮಹಿಳೆಯ ಉದ್ಯೋಗ
- ಪತಿಯ ಹೆಸರು ಮತ್ತು ಪತಿಯ ಆಧಾರ್ ಕಾರ್ಡ್ ಸಂಖ್ಯೆ
- ಪತಿಯ ಗುರುತಿನ ಚೀಟಿ ಸಂಖ್ಯೆ
- ಅರ್ಜಿ ಸಲ್ಲಿಸುವ ಮಹಿಳೆಯ ಜಾತಿ
- ಹಾಗೆ ಮಹಿಳೆಯ ಆಧಾರ್ ಕಾರ್ಡ್ ಲಿಂಕ್ ಆಗಿರುವ ಫೋನ್ ನಂಬರ್
- ಮಹಿಳೆಯ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಐಎಫ್‌ಎಸ್‌ಸಿ ಕೋಡ್
- ಕೊನೆಯದಾಗಿ ಈಗಾಗಲೇ ಈ ಮೇಲೆ ತಿಳಿಸಿದ ಎಲ್ಲಾ ದಾಖಲೆಗಳ ಪ್ರತಿ ಅಂದರೆ ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್, ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್, ಅದೇ ರೀತಿ ಪತಿಯ ಆಧಾರ್ ಜೆರಾಕ್ಸ್ ಗಳನ್ನು ನೀಡುವುದು ಕಡ್ಡಾಯ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.
- ಹಾಗೆ ಇನ್ನಿತರ ಕೆಲವು ಮಾಹಿತಿಗಳನ್ನು ಮತ್ತು ದಾಖಲೆಗಳನ್ನು ಅರ್ಜಿ ಸಲ್ಲಿಸುವಾಗ ಪಡೆಯಲಾಗುತ್ತದೆ ಆ ಎಲ್ಲಾ ದಾಖಲೆಗಳನ್ನು ಅರ್ಜಿ ಸಲ್ಲಿಸುವ ಮಹಿಳೆಯರು ಕಡ್ಡಾಯವಾಗಿ ನೀಡಬೇಕು ಇಲ್ಲದಿದ್ದರೆ ಅರ್ಜಿ ತಿರಸ್ಕರಿಸಲಾಗುತ್ತದೆ ಅಂದರೆ 2000 ನೀಡಲಾಗುವುದಿಲ್ಲ ಎಂದು ತಿಳಿಸಲಾಗಿದೆ.