ಎಲ್ಲರಿಗೂ ನಮಸ್ಕಾರ…
ಕರ್ನಾಟಕ ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ, ಹೌದು ರಾಜ್ಯ ಸರ್ಕಾರ ಪ್ರತಿವರ್ಷವೂ ಕೂಡ ಬಡ ಮಕ್ಕಳಿಗೆ ತಮ್ಮ ಮುಂದಿನ ವಿದ್ಯಾಭ್ಯಾಸಕ್ಕಾಗಿ ಸ್ವಲ್ಪಮಟ್ಟಿನ ಸಹಾಯ ಆಗಲಿ ಅಥವಾ ಆ ವಿದ್ಯಾರ್ಥಿ ವೇತನದಿಂದ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ನೆರವಾಗಲಿ ಎಂದು ಪ್ರತಿ ವರ್ಷವೂ ಕೂಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ರಾಜ್ಯ ಸರ್ಕಾರದಿಂದ ನೀಡಲಾಗುತ್ತಿದೆ ಆದರೆ ಈ ಹಿಂದೆ ಈ ವಿದ್ಯಾರ್ಥಿ ವೇತನದ ಹಣವನ್ನು ನೇರವಾಗಿ ವಿದ್ಯಾರ್ಥಿಯ ಕೈಗೆ ನೀಡಲಾಗುತ್ತಿತ್ತು ಆದರೆ ಇದೀಗ ದೇಶ ಡಿಜಿಟಲ್ ಯುಗಕ್ಕೆ ಬದಲಾದಂತೆ ವಿದ್ಯಾರ್ಥಿವೇತನವು ಕೂಡ ಪ್ರತಿವರ್ಷ ವಿದ್ಯಾರ್ಥಿ ಬ್ಯಾಂಕ್ ಅಕೌಂಟ್ಗೆ ಜಮಾ ಆಗುತ್ತಿದ್ದು ಇದೀಗ 2023 24ನೇ ಸಾಲಿನ SSP ವಿದ್ಯಾರ್ಥಿ ವೇತನಕ್ಕೆ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಜಿಗಳನ್ನು ಆಹ್ವಾನಿಸುವುದಾಗಿ ಸರ್ಕಾರದಿಂದ ತಿಳಿಸಲಾಗಿದೆ ಹಾಗಾದರೆ ಯಾವ ವಿದ್ಯಾರ್ಥಿಗಳು ಯಾವ ದಿನಾಂಕದೊಳಗೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಎಂಬ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ..
ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್:
ಈಗಾಗಲೇ ತಿಳಿಸಿದ ಹಾಗೆ ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಸರಕಾರದಿಂದ ಗುಡ್ ನ್ಯೂಸ್ ನೀಡಲಾಗಿದೆ ಅದರಲ್ಲೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇದು ಮುಖ್ಯ ಮಾಹಿತಿಯಾಗಿದೆ. ಹೌದು ರಾಜ್ಯ ಸರ್ಕಾರದಿಂದ ಇದೀಗ 2023 24 ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಿದೆ ಅಂದರೆ ಸರ್ಕಾರದ ವಿದ್ಯಾರ್ಥಿ ವೇತನದ ಅಧಿಕೃತ ವೆಬ್ಸೈಟ್ನಲ್ಲಿ ಅರ್ಜಿಗಳನ್ನು ಸ್ವೀಕರಿಸುವುದಾಗಿ ಆದೇಶ ಹೊರಡಿಸಿದ್ದು ಇದೀಗ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದ ಸರ್ಕಾರ.?
ಹೌದು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023 24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೌದು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023 24ನೇ ಸಾಲಿನಲ್ಲಿ ವ್ಯಾಸಾಂಗ ಮಾಡುತ್ತಿರುವ ಒಂದರಿಂದ 10ನೇ ತರಗತಿಯ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿಯನ್ನು ಸರ್ಕಾರದಿಂದ ಸ್ವೀಕರಿಸುತಾಗಿ ತಿಳಿಸಲಾಗಿದೆ.
SSP ವಿದ್ಯಾರ್ಥಿ ವೇತನಕ್ಕೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು.?
2022 23ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳ ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸುವಂತಿಲ್ಲ. ಹಾಗೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಒಂದನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಅಂದರೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ, ಇನ್ನು ಈ ವಿದ್ಯಾರ್ಥಿ ವೇತನಕ್ಕೆ ಈಗಾಗಲೇ ತಿಳಿಸಿದ ಹಾಗೆ ಮುಖ್ಯವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಹಾಗೂ ಅನರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು.?
ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ಹಾಗೆ ವಿದ್ಯಾರ್ಥಿ ವೇತನಕ್ಕೆ ಕೆಲವು ಕಡ್ಡಾಯ ದಾಖಲಾತಿಗಳು ಇದ್ದೇ ಇರುತ್ತವೆ. ಇನ್ನು ಕೆಲವು ವಿದ್ಯಾರ್ಥಿ ವೇತನಕ್ಕೆ ಬೇರೆ ದಾಖಲಾತಿಗಳನ್ನು ಕೇಳಲಾಗುತ್ತದೆ ಆದರೆ ಈ ಸರ್ಕಾರಿ ವಿದ್ಯಾರ್ಥಿ ವೇತನಕ್ಕೆ ಮುಖ್ಯವಾಗಿ, SATS ID ಸಂಖ್ಯೆ ಸಂಬಂಧಪಟ್ಟ ಶಾಲೆಗಳಿಂದ ಪಡೆದು ನೀಡಬೇಕಾಗುತ್ತದೆ, ಪೋಷಕರ ಮೊಬೈಲ್ ಸಂಖ್ಯೆ, ಆಧಾರ್ ಸಂಖ್ಯೆ ವಿದ್ಯಾರ್ಥಿಯ ಬ್ಯಾಂಕ್ ಖಾತೆ ಅಥವಾ ವಿದ್ಯಾರ್ಥಿ ಮತ್ತು ಅವರ ಪೋಷಕರು ಜಂಟಿ ಮಾಡಿಸಿರುವ ಬ್ಯಾಂಕ್ ಖಾತೆ ಸಂಖ್ಯೆ ಕೊಡಬೇಕಾಗುತ್ತದೆ ಹಾಗೆ ನಿಮ್ಮ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ನಿಮ್ಮ ಈ ಇಂದಿನ ವ್ಯಾಸಂಗ ಪ್ರಮಾಣ ಪತ್ರ ಮತ್ತು ಇನ್ನಿತರ ಕೆಲವು ದಾಖಲಾತಿಗಳನ್ನು ಕೇಳಲಾಗುತ್ತದೆ ಆದರೆ ಅರ್ಜಿ ಸಲ್ಲಿಸುವ ಮೊದಲು ಕಡ್ಡಾಯವಾಗಿ ಆಧಾರ್ ಕಾರ್ಡ್ಗೆ ಫೋನ್ ನಂಬರ್ ಲಿಂಕ್ ಆಗಿರಲೇಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು.
SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಎಲ್ಲಿ ಮತ್ತು ಹೇಗೆ.?
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023 24ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಅಂದರೆ. https://ssp.karnataka.gov.in ವೆಬ್ಸಕ್ಕೆ ಭೇಟಿ ನೀಡಿ ಇದೇ ಅಕ್ಟೋಬರ್ 20ರ ಒಳಗಾಗಿ ಅರ್ಜಿ ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ. ಜಂಟಿ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಅಥವಾ ದೂರವಾಣಿ ಸಂಖ್ಯೆ: 080-22240449, 080-28461351ಕರೆ ಮಾಡಿ ಅಥವಾ ಮೊಬೈಲ್ ಸಂಖ್ಯೆ: 9480843052 ಸಂಪರ್ಕಿಸಿ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.